ತುಮಕೂರು: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ (Tiger Claw Pendent) ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ, ರಾಷ್ಟ್ರಪಕ್ಷಿ ನವಿಲು (Peacock) ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಬಂಧಿಸಿದ ಘಟನೆ ತುಮಕೂರಿನ (Tumakuru) ಮಾರನಾಯಕನಪಾಳ್ಯದಲ್ಲಿ (Maranayakanapalya) ನಡೆದಿದೆ. ಒಡಿಶಾ (Odisha) ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. ಬಂಧಿತರು ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಹಲವು ದಿನಗಳಿಂದ ಆರೋಪಿಗಳು ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು ಮತ್ತು ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನು ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ (FSL) ಕಳುಹಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…
ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…
ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಮೃತ…
ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…
ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…
ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…