ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ ನಂ.23ನೇ ಆರೋಪ ಸುಳಿವು ಕೊಟ್ಟವರಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಎನ್‌ಐಎ (NIA) ಘೋಷಿಸಿದೆ. ಈ ಸಂಬಂಧ ಎನ್‌ಐಎ ರಿವಾರ್ಡ್‌ ವಾಂಟೆಡ್‌ ನೋಟಿಸ್‌ ಅನ್ನು ಬಿಡುಗಡೆ ಮಾಡಿದೆ. ಆರೋಪಿ ನಂ.23 ನೌಷಾದ್‌ನ ಸುಳಿವಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಲೂಕಿನ ಪಡಂಗಡಿ ಗ್ರಾಮದ ಹಮೀದ್ ಮಗ ನೌಷಾದ್. ಈತ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ