ಪೈಚಾರ್: ಇಲ್ಲಿನ ಶಾಂತಿನಗರ ತಿರುವಿನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಐಶರ್ ಟಿಪ್ಪರ್ ಹಾಗೂ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಆ ಕಾರಿಗೆ ಹಿಂದೆಯಿಂದ ಬೈಕ್ ಒಂದು ಡಿಕ್ಕಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಘಾತಕ್ಕೆ ಮುಖ್ಯ ಕಾರಣ ಅಸಮರ್ಪಕ ಹಾಗೂ ಕಿರಿದಾದ ರಸ್ತೆಯೆಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.