Categories: ಕ್ರೈಂ

ಪ್ರಾರ್ಥನಾ ಮಂದಿರದಲ್ಲಿ ನಡೆದಿರೋದು IED ಬ್ಲಾಸ್ಟ್: ದೃಢಪಡಿಸಿದ ಪೊಲೀಸರು

Advertisement
Advertisement
Advertisement

ತಿರುವನಂತಪುರಂ: ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ (Kalamassery) ನಡೆದಿರುವುದು ಐಇಡಿ ಬ್ಲಾಸ್ಟ್ (IED Blast) ಎಂದು ಪೊಲೀಸರು ದೃಢಪಡಿಸಿದ್ದಾರೆ. ಸದ್ಯ ಈ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಘಟನೆಯ ಬಳಿಕ ತನಿಖೆಯ ನೇತೃತ್ವ ವಹಿಸಲು ಒಟ್ಟು 8 ವಿಶೇಷ ತಂಡಗಳನ್ನು ನೇಮಿಸಲಾಗಿದೆ. ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇರುವ ಶಂಕೆ ದಟ್ಟವಾಗಿದೆ. ಕೇರಳ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಲು ಕಲಮಶ್ಶೇರಿಗೆ ತೆರಳಿದ್ದಾರೆ. ಎಲ್ಲಾ ಆಯಾಮಗಳಿಂದಲೂ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತದೆ ಎಂದು ಎಡಿಜಿಪಿ ತಿಳಿಸಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ. ಶಂಕಿತರ ಸಾಮಾಜಿಕ ಜಾಲತಾಣಗಳ ಚಟುವಟಿಕೆ ಆಧರಿಸಿ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಜೊತೆಗೆ ಈ ಸ್ಫೋಟ ಪೂರ್ವ ನಿಯೋಜಿತ ಕೃತ್ಯವೇ ಎಂಬುದನ್ನು ಖಚಿತಪಡಿಸಲು ರಾಜ್ಯ ಅಥವಾ ಕೇಂದ್ರ ಸಂಸ್ಥೆಗಳಿಗೆ ಯಾವುದೇ ವರದಿಗಳು ಬಂದಿಲ್ಲ ಎಂಬುದಾಗಿ ತಿಳಿದುಬಂದಿದೆ.

ಇತ್ತ ಗಾಯಾಳುಗಳ ಆರೋಗ್ಯ ವಿಚಾರಿದ ಬಳಿಕ ಜಿಲ್ಲಾಧಿಕಾರಿ ಎನ್‍ಎಸ್‍ಕೆ ಉಮೇಶ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, 10 ಜನರನ್ನು ಕಲಮಶ್ಶೇರಿ ವೈದ್ಯಕೀಯ ಕಾಲೇಜಿನ ಸುಟ್ಟಗಾಯಗಳ ಘಟಕಕ್ಕೆ ದಾಖಲಿಸಲಾಗಿದೆ. ಅವರಲ್ಲಿ 50 ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಇಬ್ಬರನ್ನು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನು 8 ಜನರನ್ನು ವೈದ್ಯಕೀಯ ಕಾಲೇಜಿನ ಸಾಮಾನ್ಯ ವಾರ್ಡ್‍ನಲ್ಲಿ ದಾಖಲಿಸಲಾಗಿದ್ದು, ಉಳಿದ 18 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಘಟನೆಯಲ್ಲಿ ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ಉಮೇಶ್ ಇದೇ ವೇಳೆ ತಿಳಿಸಿದರು.

Advertisement
namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Recent Posts

Advertisement

ಜಟ್ಟಿಪಳ್ಳ: ಮನೆಯಿಂದ ಕಳವು ಪ್ರಕರಣ; ಕಳ್ಳನ ಹೆಡೆಮುರಿ ಕಟ್ಟಿದ ಪೋಲಿಸರು,

ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು‌ ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…

5 days ago

ತಿಂಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಲಂಡನ್‌ ನದಿಯಲ್ಲಿ ಶವವಾಗಿ ಪತ್ತೆ

ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…

5 days ago

ಅರಂಬೂರು: ಹೊಳೆಯಲ್ಲಿ ಮುಳುಗಿದ ವ್ಯಕ್ತಿ; ಶವ ಮೇಲೆತ್ತಿದ ಪೈಚಾರ್ ಮುಳುಗು ತಜ್ಞರ ತಂಡ

ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ‌ ಮೃತಪಟ್ಟ ಘಟನೆ ನಡೆದಿದ್ದು, ಮೃತ…

6 days ago

ಗಂಟಲಲ್ಲಿ ಚಕ್ಕುಲಿ ಸಿಲುಕಿಕೊಂಡು ಪುಟ್ಟ ಕಂದಮ್ಮ ದುರ್ಮರಣ

ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…

6 days ago

ಮಲಯಾಳಂನ ಖ್ಯಾತ ಹಿರಿಯ ನಟಿ ಆರ್‌. ಸುಬ್ಬಲಕ್ಷ್ಮಿ ನಿಧನ

ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್‌. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…

6 days ago

ಭಾರತ-ಆಸೀಸ್‌‌ ಪಂದ್ಯಕ್ಕೆ ಎದುರಾಯ್ತು ಹೊಸ ಸಂಕಷ್ಟ! ಇದು ಮಳೆಯಲ್ಲ ಕರೆಂಟ್‌‌ ಸಮಸ್ಯೆ

ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…

6 days ago
Advertisement
Advertisement