Advertisement
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಮಳೆಯಾಗಲಿದೆ. ಅಲ್ಲದೇ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಮಳೆಯಾಗಬಹುದು. ಇನ್ನು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ವಾರ ಪೂರ್ತಿ ವರುಣ ಅಬ್ಬರಿಸಲಿದ್ದಾನೆ. ಅಲ್ಲದೇ ನವೆಂಬರ್ 1 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ. ಮೈಸೂರು, ಹಾಸನ, ಕೋಲಾರ, ಶಿವಮೊಗ್ಗ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲೂ ಸಹ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಂಗಳವಾರದಿಂದ ರಾಜ್ಯದ ಹಲವೆಡೆ ವರುಣ ಅಬ್ಬರಿಸುವುದು ಪಕ್ಕಾ. ಇಷ್ಟು ದಿನ ನಿಂತಿದ್ದ ಮಳೆ ಮತ್ತೆ ಬರೋಕೆ ಶುರು ಮಾಡುತ್ತೆ
Advertisement