ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿದ್ದರು. ನಮ್ಮ ಮೆಟ್ರೋ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಧ್ವನಿ ನೀಡಿದ್ದ ಅಪರ್ಣಾ, ಮೂಡಲ ಮನೆ, ಮುಕ್ತ ಮುಕ್ತ ಮೊದಲಾದ ಧಾರಾವಾಹಿಗಳಲ್ಲೂ ನಟಿಸಿದ್ದರು. ದೀಪಾವಳಿ ಕಾರ್ಯಕ್ರಮದಲ್ಲಿ ಸತತ 8 ಗಂಟೆಗಳ ಕಾಲ ನಿರೂಪಣೆ ಮಾಡಿದ್ದ ಅಪರ್ಣಾ, 2013 ರಲ್ಲಿ ಬಿಗ್ ಬಾಸ್ ಶೋ ನಲ್ಲಿಯೂ ಭಾಗವಹಿಸಿದ್ದರು.

Leave a Reply

Your email address will not be published. Required fields are marked *