ಅಹಮದಾಬಾದ್: ಇದೇ ನವೆಂಬರ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಪಂದ್ಯದಿಂದ ಆಸ್ಟ್ರೇಲಿಯಾ ಸ್ಟಾರ್ ಆಲ್‌ರೌಂಡರ್ ಗ್ಲೇನ್‌ ಮ್ಯಾಕ್ಸ್‌ವೆಲ್‌ (Glenn Maxwell) ಹೊರಗುಳಿದಿದ್ದಾರೆ. ಗಾಲ್ಫ್ ಕಾರ್ಟ್‌ನಲ್ಲಿ (Golf Cart) (ಗಾಲ್ಫ್ ಕೋರ್ಟ್‌ನಲ್ಲಿ ಬಳಸುವ ವಾಹನ) ಕ್ಲಬ್‌ಹೌಸ್‌ನಿಂದ ಹೋಟೆಲ್‌ಗೆ ಹಿಂದಿರುಗುತ್ತಿದ್ದ ವೇಳೆ ಮ್ಯಾಕ್ಸ್‌ವೆಲ್‌ ಕಾರ್ಟ್‌ನಿಂದ ಸ್ಲಿಪ್‌ಆಗಿ ಬಿದ್ದಿದ್ದಾರೆ. ಇದರಿಂದ ತಲೆಗೆ ಪೆಟ್ಟಾಗಿದ್ದು, ತೀವ್ರ ನೋವನುಭವಿಸಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಅವರಿಗೆ ವಿಶ್ರಾಂತಿ ಬೇಕಿರುವುದರಿಂದ ಇಂಗ್ಲೆಂಡ್ (England) ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಆಸ್ಟ್ರೇಲಿಯಾ ತಂಡದ ಕೋಚ್ ಆಂಡ್ರ‍್ಯೂ ಮೆಕ್‌ಡೊನಾಲ್ಡ್ ತಿಳಿಸಿದ್ದಾರೆ. ಸದ್ಯ ಸೆಮಿಫೈನಲ್‌ಗೆ ಸನಿಹದಲ್ಲಿರುವ ಆಸೀಸ್, ಇಂಗ್ಲೆಂಡ್ ವಿರುದ್ಧ ಮ್ಯಾಕ್ಸ್‌ವೆಲ್‌ ಬದಲಿಗೆ ಕ್ಯಾಮರೂನ್ ಗ್ರೀನ್ (Cameron Green) ಅಥವಾ ಮಾರ್ಕಸ್ ಸ್ಟೋಯ್ನಿಸ್ (Marcus Stoinis) ಅವರನ್ನು ಕಣಕ್ಕಿಳಿಸುವ ಪ್ಲ್ಯಾನ್ ಮಾಡಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ