ಬಿಹಾರದ (Bihar) ಸರನ್ ಜಿಲ್ಲೆಯ ಸರ್ಯು ನದಿಯಲ್ಲಿ (Saryu River) ಬುಧವಾರ ದೋಣಿ ಮುಳುಗಿ (Boat Capsizes) ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 7 ಮಂದಿ ನಾಪತ್ತೆಯಾಗಿದ್ದಾರೆ. ಇಬ್ಬರು ಮಹಿಳೆಯರ ದೇಹಗಳನ್ನು ಹೊರತೆಗೆಯಲಾಗಿದೆ. ದೋಣಿಯಲ್ಲಿದ್ದ 9 ಮಂದಿ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾಗಿರುವ 7 ಮಂದಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿಯಿಡೀ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.
ಯಾವ ಕಾರಣದಿಂದ ಈ ಘಟನೆ ನಡೆದಿದೆ ಎಂಬುದರ ಬಗ್ಗೆ ತನಿಖೆ ತನಿಖೆ ನಡೆಯುತ್ತಿದೆ. ಇದು ರಾಜ್ಯದಲ್ಲಿ ಇತ್ತೀಚೆಗೆ ನಡೆದ ಎರಡನೇ ದೊಡ್ಡ ದೋಣಿ ದುರಂತವಾಗಿದೆ.
ಸೆಪ್ಟೆಂಬರ್ 14 ರಂದು ಮುಜಾಫರ್‍ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ದೋಣಿಯೊಂದು ಮುಳುಗಿ 15ಕ್ಕೂ ಹೆಚ್ಚು ಮಕ್ಕಳು ಮುಳುಗಿ ಸಾವನ್ನಪ್ಪಿದರು.
ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…
ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…
ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಮೃತ…
ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…
ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…
ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…