ನಿರಂತರ 38ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡು 3500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿ ಕರ್ತವ್ಯವನ್ನು ಸೇವಾ ಕಾರ್ಯವೆಂದು ಪರಿಗಣಿಸಿ ಮುಂದುವರೆಯುತ್ತಿರುವ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆ ಯನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರ್ ವತಿಯಿಂದ ಗೌರವಿಸಲಾಯಿತು. ಹಿಂದೆ ಟ್ರಸ್ಟ್ ಆಂಬುಲೆನ್ಸ್ ವಾಹನ ಅಪಘಾತಗೊಂಡು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದ್ದು ಮತ್ತೆ ಟ್ರಸ್ಟ್ ಗೆ ಹೊಸ ಆಂಬುಲೆನ್ಸ್ ವಾಹನ ಬರುವಲ್ಲಿ ನಿಸ್ವಾರ್ಥ ಸೇವೆ ನೀಡಿ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಈ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಮಾಂಡವಿ ಮೋಟಾರ್ಸ್ ಸಂಸ್ಥೆಯ ಮಾರ್ಕೆಟಿಂಗ್ ಮೆನೇಜರ್ ಸುರೇಶ್ ಭಟ್, ಸೇವಾ ಮುಖ್ಯಸ್ಥ ಸುದೇಶ್ ಜೈನ್, ದುರ್ಗಾ ದಾಸ್ ಕಡ್ಲಾರು, ಪುನೀತ್ ಹಾಲೇಮಜಲ್,ವಿಮಾ ವಿಭಾಗ ಪ್ರಮುಖ್ ಸಂದೀಪ್, ಭರತ್, ಹರೀಶ್,ಹಾಗೂ ಸರ್ವ ಸಿಬ್ಬಂದಿಗಳು,ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ,ಕಾರ್ಯದರ್ಶಿ ಯತೀಂದ್ರ ಕಟ್ಟೆಕೋಡಿ, ಉಪಾಧ್ಯಕ್ಷ ಮೋಹನ್ ದಾಸ್ ಶಿರಾಜೆ, ಪದ್ಮನಭ ಹಲ್ಲಡ್ಕ ಉಪಸ್ಥಿತರಿದ್ದರು
ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…
ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…
ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಮೃತ…
ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…
ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…
ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…