ಮುಂಬೈ: ವಿಶ್ವಕಪ್ ಕ್ರಿಕೆಟ್‌ನಲ್ಲಿ (Word Cup Cricket) ಭಾರತದ (Team India) ಅಜೇಯ ಓಟ ಮುಂದುವರಿದಿದ್ದು ಸೆಮಿಫೈನಲ್ ಪ್ರವೇಶಿಸಿದೆ. ಶ್ರೀಲಂಕಾ (Sri Lanka) ವಿರುದ್ಧ ಭರ್ಜರಿ 302 ರನ್‌ಗಳಿಂದ ಜಯಗಳಿಸಿದ ಭಾರತ ಸೆಮಿಫೈನಲ್ (Semi Final) ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಟಾಸ್ ಸೋತು ಬ್ಯಾಟ್ ಮಾಡಿದ ಭಾರತ ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ಆಟದಿಂದ 8 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿತು. ಭಾರೀ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಲಂಕಾ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿ ಅಂತಿಮವಾಗಿ 19.4 ಓವರ್‌ಗಳಲ್ಲಿ 55 ರನ್‌ಗಳಿಗೆ ಸರ್ವಪತನ ಕಂಡಿತು.
ಶ್ರೀಲಂಕಾ 3 ರನ್‌ಗಳಿಸುವಷ್ಟರಲ್ಲಿ ಪ್ರಮುಖ 4 ವಿಕೆಟ್ ಕಳೆದುಕೊಂಡಿತ್ತು. ತಂಡದ 4 ಮಂದಿ ಆಟಗಾರರು 0 ಸುತ್ತಿದ್ದರು. ಇತರ ರೂಪದಲ್ಲಿ 10 ರನ್( 5 ಬೈ, 1 ಲೆಗ್‌ಬೈ, 4 ವೈಡ್) ಬಂದ ಕಾರಣ ಲಂಕಾದ ಸ್ಕೋರ್ 50 ರನ್ ಗಡಿ ದಾಟಿತ್ತು.
ಶಮಿ (Mohammed Shami) ಮಾರಕ ಬೌಲಿಂಗ್ ಮಾಡಿ 5 ವಿಕೆಟ್ ಕಿತ್ತರೆ ಸಿರಾಜ್ 3 ವಿಕೆಟ್ ಪಡೆದರು. ಬುಮ್ರಾ ಮತ್ತು ಜಡೇಜಾ ತಲಾ ಒಂದೊಂದು ವಿಕೆಟ್ ಕಿತ್ತರು. ರೋಹಿತ್ ಶರ್ಮಾ 4 ರನ್ ಗಳಿಸಿ ಔಟಾದರೂ ಎರಡನೇ ವಿಕೆಟಿಗೆ ಶುಭಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ 179 ಎಸೆತಗಳಲ್ಲಿ 189 ರನ್ ಜೊತೆಯಾಟವಾಡಿ ಭದ್ರವಾದ ಇನ್ನಿಂಗ್ಸ್ ಕಟ್ಟಿದರು. ಶುಭಮನ್ ಗಿಲ್ 92 ರನ್ ( 92 ಎಸೆತ, 11 ಬೌಂಡರಿ, 2 ಸಿಕ್ಸರ್), ವಿರಾಟ್ ಕೊಹ್ಲಿ 88 ರನ್ ( 94 ಎಸೆತ, 11 ಬೌಂಡರಿ) ಶ್ರೇಯಸ್ ಅಯ್ಯರ್ 82 ರನ್ (56 ಎಸೆತ, 3 ಬೌಂಡರಿ, 6 ಸಿಕ್ಸರ್) ರವೀಂದ್ರ ಜಡೇಜಾ 35 ರನ್ ( 24 ಎಸೆತ, 1 ಬೌಂಡರಿ, 1 ಸಿಕ್ಸರ್) ಸಿಡಿಸಿ ಔಟಾದರು.
ಈ ಮೂಲಕ ಶಮಿ ಭಾರತೀಯ ಕ್ರಿಕೆಟ್ ಬೌಲಿಂಗ್ ವಿಭಾಗದಲ್ಲಿ 45 ವಿಕೆಟ್ ಕಬಳಿಸಿ, ಝಹೀರ್ ಖಾನ್ ದಾಖಲೆಯನ್ನು ಮುರಿದರು.
ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…
ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…
ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಮೃತ…
ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…
ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…
ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…