ಹೌದು, ಉರ್ಫಿ ಜಾವೇದ್ ಅರೆಸ್ಟ್ ಆಗಿದ್ದೇ ಸುಳ್ಳು ಸುದ್ದಿ ಅಂತ ಪೊಲೀಸ್ ಮೂಲಗಳು ತಿಳಿಸಿವೆ. ಅಶ್ಲೀಲತೆಯ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆಂದು ಹೇಳಲಾದ ವೈರಲ್ ವಿಡಿಯೋ ನಿಜವಲ್ಲಅಂತ ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಚಿಹ್ನೆ ಮತ್ತು ಪೊಲೀಸ್ ಸಮವಸ್ತ್ರವನ್ನು ದುರುಪಯೋಗಪಡಿಸಲಾಗಿದ್ದಕ್ಕೆ ಕೇಸ್ ದಾಖಲಿಸಲಾಗಿದೆ ಅಂತ ಮುಂಬೈ ಪೊಲೀಸರು ಟ್ವೀಟ್ ಮಾಡಿದ್ದಾರೆ.

https://x.com/ani/status/1720480388404126131?s=46

ನಕಲಿ ಪೊಲೀಸರನ್ನು ಬಂಧಿಸಿದ ಅಸಲಿ ಪೊಲೀಸರು!

ಸಮಾಜವನ್ನು ದಾರಿತಪ್ಪಿಸುವ ಈ ವಿಡಿಯೋದಲ್ಲಿ ಭಾಗಿಯಾಗಿರುವವರ ವಿರುದ್ಧ ಓಶಿವಾರಾ ಪಿಎಸ್‌ಟಿಎನ್‌ನಲ್ಲಿ ಸೆಕ್ಷನ್ 171, 419, 500, 34 ಐಪಿಸಿ ಅಡಿಯಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿರುವಾಗ, ನಕಲಿ ಇನ್ಸ್‌ಪೆಕ್ಟರ್‌ನನ್ನು ಬಂಧಿಸಲಾಗಿದೆ ಮತ್ತು ವಾಹನವನ್ನೂ ವಶಪಡಿಸಿಕೊಳ್ಳಲಾಗಿದೆ ಅಂತ ಮುಂಬೈ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ