ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕೊಡಗಿನಲ್ಲಿ ಭರ್ಜರಿ ಮಳೆಯಾಗಲಿದೆ. ಬೆಂಗಳೂರಲ್ಲಿ ನಿನ್ನೆ ಮಧ್ಯಾಹ್ನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ, ಇಂದು ಸಹ ಸಾಧಾರಣ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಭರ್ಜರಿ ಮಳೆ ಬರಬಹುದು. ಕೊಡಗು, ಚಿಕ್ಕಮಗಳೂರು, ಚಾಮರಾಜನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅದಕ್ಕೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲೂ ಸಹ ಗುಡುಗ ಸಹಿತ ಮಳೆಯಾಗಲಿದೆ. ನಾಳೆಯೂ ಸಹ ವರುಣ ಅಬ್ಬರಿಸಲಿದ್ದಾನೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ. ಒಟ್ಟಿನಲ್ಲಿ ನವೆಂಬರ್ 8ನೇ ದಿನಾಂಕದವರೆಗೆ ಭರ್ಜರಿ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ