ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡವಾದ ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಹತ್ಯೆಯಾದ ವ್ಯಕ್ತಿ. ಅಕ್ಷಯ್‌ ಕಲ್ಲೇಗ ವಿವೇಕಾನಂದ ಕಾಲೇಜ್‌ ಬಳಿ ನಿವಾಸಿಯಾಗಿದ್ದು,

ತಂದೆ ಚಂದ್ರಶೇಖರ, ತಾಯಿ ಕುಸುಮ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಕಳೆದ 6 ವರ್ಷಗಳಿಂದ ಕಲ್ಲೇಗ ಟೈಗರ್ಸ್‌ ಎಂಬ ಹುಲಿ ವೇಷ ತಂಡವನ್ನು ಅವರು ಮುನ್ನಡೆಸುತ್ತಿದ್ದರು. ಈ ತಂಡ ಪುತ್ತೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಭಾರೀ ಜನ ಪ್ರಿಯತೆಯನ್ನು ಗಳಿಸಿತ್ತು. ಹುಲಿ ಕುಣಿತದ ಪಂಥ ಕೂಟಗಳಲ್ಲಿ ಪ್ರಶಸ್ತಿಗಳನ್ನು ಬಾಚಿತ್ತು. ಈ ಮೂಲಕ ಪುತ್ತೂರಿನಲ್ಲಿ ಹುಲಿ ಕುಣಿತ ತಂಡಕ್ಕೆ ಸ್ಟಾರ್‌ ಗಿರಿಯನ್ನು ತಂದುಕೊಟ್ಟಿದ್ದರು.ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಅದರ ಮುಂದುವರಿದ ಭಾಗವಾಗಿ ಅಕ್ಷಯ್‌ ನನ್ನು ನೆಹರೂ ನಗರಕ್ಕೆ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೃತ್ಯವು ರಾತ್ರಿ 11.30 ಗಂಟೆ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರು ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಮನೀಶ್‌ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು . ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ