ಮಲಪ್ಪುರಂ: ಇಲ್ಲಿನ ಮಂಜೇರಿಯಲ್ಲಿ ನಡೆದ ಅಪಘಾತದಲ್ಲಿ ಖ್ಯಾತ ಸಾಮಾಜಿಕ ಜಾಲತಾಣ ಸೆಲೆಬ್ರಿಟಿ ಜುನೈದ್ (32ವ) ಸಾವನ್ನಪ್ಪಿದ್ದಾರೆ. ಮಂಜೇರಿಯ ಕರಕ್ಕುನ್ನುವಿನ ಮರಾತ್ತಾಣಿ ತಿರುವಿನಲ್ಲಿ ಅವರು ಚಲಾಯಿಸುತ್ತಿದ್ದ ಬೈಕ್ ಮರಳಿನ ದಿಬ್ಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿ ಕೆಳಗೆ ಬಿದ್ದರು. ಅಪಘಾತದಲ್ಲಿ ತಲೆಯ ಹಿಂಭಾಗಕ್ಕೆ ತೀವ್ರ ಏಟಾಗಿದ್ದು, ರಕ್ತದ ಮಡುವಿನಲ್ಲಿ ರಸ್ತೆಬದಿಯಲ್ಲಿ ಬಿದ್ದಿದ್ದ ಜುನೈದ್ ಅವರನ್ನು ಸ್ಥಳೀಯರು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಅವರ ಜೀವವನ್ನು ಉಳಿಸಲಾಗಲಿಲ್ಲ.