ಇಸ್ಲಾಮಾಬಾದ್: ಹಲವು ಔಷಧೀಯ ಗುಣಗಳನ್ನು ಹೊಂದಿರುವ ಅಪರೂಪದ ಮೀನುಗಳನ್ನು ಮಾರಾಟ ಮಾಡಿ ಪಾಕಿಸ್ತಾನದ ಮೀನುಗಾರನೊಬ್ಬ (Pakistan Fisherman) ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಬಡ ಇಬ್ರಾಹಿಂ ಹೈದರಿ ಮೀನುಗಾರಿಕಾ ಗ್ರಾಮದಲ್ಲಿ ವಾಸಿಸುವ ಹಾಜಿ ಬಲೋಚ್ ಮತ್ತು ಆತನ ಸಂಗಡಿಗರು ಅರಬ್ಬಿ ಸಮುದ್ರದಿಂದ ಗೋಲ್ಡನ್ ಫಿಶ್ ಅಥವಾ “ಸೋವಾ” (Sowa Fish) ಎಂದು ಕರೆಯಲ್ಪಡುವ ಮೀನುಗಳನ್ನು ಹಿಡಿದಿದ್ದರು. ಮೀನು ಮಾರಿ ಬಂದ ಹಣವನ್ನು 7 ಮಂದಿ ಮೀನುಗಾರರು ಹಂಚಿಕೊಂಡಿದ್ದಾರೆ.

ಶುಕ್ರವಾರ ಬೆಳಗ್ಗೆ ಕರಾಚಿ ಬಂದರಿನಲ್ಲಿ ಅಪರೂಪದ ಮೀನುಗಳನ್ನು ಹರಾಜು ಹಾಕಲಾಯಿತು. ಸುಮಾರು 7 ಕೋಟಿ ರೂಪಾಯಿಗೆ ಮೀನು ಮಾರಾಟವಾಗಿದೆ ಎಂದು ಪಾಕಿಸ್ತಾನದ ಮೀನುಗಾರರ ಜಾನಪದ ವೇದಿಕೆಯ ಮುಬಾರಕ್ ಖಾನ್ ತಿಳಿಸಿದ್ದಾರೆ.

ಸೋವಾ ಮೀನು ಅಪರೂಪದ್ದು ಮತ್ತು ಬೆಲೆಬಾಳುವಂತಹದ್ದು. ಏಕೆಂದರೆ ಅದರ ಹೊಟ್ಟೆಯಲ್ಲಿರುವ ಪದಾರ್ಥಗಳು ಕಾಯಿಲೆಗಳನ್ನು ಗುಣಪಡಿಸುವ ಮತ್ತು ಔಷಧೀಯ ಗುಣಗಳನ್ನು ಹೊಂದಿವೆ ಎಂದು ಹೇಳಲಾಗುತ್ತದೆ. ಮೀನಿನ ದಾರದಂತಹ ವಸ್ತುವನ್ನು ಶಸ್ತ್ರಚಿಕಿತ್ಸಾ ವಿಧಾನಗಳಲ್ಲಿಯೂ ಬಳಸಲಾಗುತ್ತದೆ. ಒಂದು ಮೀನು ಹರಾಜಿನಲ್ಲಿ ಸುಮಾರು 70 ಲಕ್ಷ ರೂಪಾಯಿಗೆ ಮಾರಾಟವಾಗುತ್ತದೆ. ಸಾಮಾನ್ಯವಾಗಿ 20 ರಿಂದ 40 ಕೆಜಿ ತೂಕದ ಮತ್ತು 1.5 ಮೀಟರ್ ವರೆಗೆ ಬೆಳೆಯುವ ಈ ಮೀನಿಗೆ ಪೂರ್ವ ಏಷ್ಯಾದ ದೇಶಗಳಲ್ಲಿ ಹೆಚ್ಚು ಬೇಡಿಕೆಯಿದೆ. ಸೋವಾ ಮೀನು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಸಾಂಪ್ರದಾಯಿಕ ಔಷಧಗಳು ಮತ್ತು ಸ್ಥಳೀಯ ಪಾಕಪದ್ಧತಿಯಲ್ಲಿ ಅದರ ಬಳಕೆಯನ್ನು ಕಂಡುಕೊಳ್ಳುತ್ತದೆ. ನಾವು ಕರಾಚಿಯ ತೆರೆದ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದೆವು. ಆಗ ಈ ಬೃಹತ್ ಗೋಲ್ಡನ್ ಮೀನುಗಳನ್ನು ಹಿಡಿದಿದ್ದೇವೆ. ಸಂತಾನೋತ್ಪತ್ತಿ ಅವಧಿಯಲ್ಲಿ ಮಾತ್ರ ಮೀನುಗಳು ಕರಾವಳಿಯ ಸಮೀಪಕ್ಕೆ ಬರುತ್ತವೆ ಎಂದು ಮೀನುಗಾರರು ತಿಳಿಸಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ