ರಾಯಚೂರು: ತಾಲ್ಲೂಕಿನ ಚಿಕ್ಕಸುಗೂರು ಬಳಿ ಕೈಗಾರಿಕಾ ಪ್ರದೇಶದ (Industrial Area) ಕೆಮಿಕಲ್ ಫ್ಯಾಕ್ಟರಿಯಲ್ಲಿ (Chemical Factory) ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಬೆಂಕಿಯಿಂದ ದಟ್ಟಹೊಗೆ ಆವರಿಸುತ್ತಿದ್ದಂತೆಯೇ ಹೊರ ಓಡಿಬಂದ ಸಿಬ್ಬಂದಿ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ.

ಹೈದರಾಬಾದ್‌ ರಸ್ತೆ ಬಳಿಯ ಜಯಂತ್ ಲೈಫ್ ಸೈನ್ಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ‌ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಕೂಡಲೇ ರಸ್ತೆಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ