ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಮತ್ತು ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಕೋಶದ ಆಶ್ರಯದಲ್ಲಿ ಯುವ ನಿಧಿ ನೋಂದಣಿ ಶಿಬಿರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಈ ಶಿಬಿರದಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಭರತ್ ಮುಂಡೋಡಿ ಹಾಗೂ ಸುಳ್ಯ ತಾಲೂಕು ಅಧ್ಯಕ್ಷರಾದ ಹಮೀದ್ ಕುತ್ತಮೊಟ್ಟೆರವರು ಭಾಗವಹಿಸಿದರು.
