ಬ್ಲಾಕ್ ಕಾಂಗ್ರೆಸ್ ವತಿಯಿಂದ ಜವಾಹರಲಾಲ್ ನೆಹರು ಜನ್ಮದಿನಾಚರಣೆ ಆಚರಿಸಲಾಯಿತು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಇಂತಹ ಆಚರಣೆಗಳು

ಸಹಕಾರಿ, ತ್ಯಾಗ ಮನೋಭಾವನೆ ರಾಷ್ಟ್ರೀಯತೆಯ ಒಂದು ಭಾಗವಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ.ಎಂ. ಮುಸ್ತಫ ಹೇಳಿದರು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾರತದ ಪ್ರಥಮ ಪ್ರಧಾನ ಮಂತ್ರಿ ಯವರಾದ ಚಾಚಾ ಪಂಡಿತ್ ಜವಾಹರಲಾಲ್ ನೆಹರು ರವರ ಜನ್ಮದಿನಾಚರಣೆ ಅಂಗವಾಗಿ ನಡೆದ ಸರಳ ಸಮಾರಂಭದಲ್ಲಿ ಮಾತನಾಡುತ್ತಿದ್ದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ. ಎಸ್. ಗಂಗಾಧರ್ ವಹಿಸಿದ್ದರು. ಸಮಾರಂಭದಲ್ಲಿ ಕೆಪಿಸಿಸಿ ಸಂಯೋಜಕ ಎಸ್. ಸಂಶುದ್ದೀನ್, ಬ್ಲಾಕ್ ಕಾಂಗ್ರೆಸ್ ಘಟಕ ಅಧ್ಯಕ್ಷ ಅಶೋಕ್ ಚೂಂತಾರ್, ಇಂಟಕ್ ಘಟಕದ ಅಧ್ಯಕ್ಷ ಶಾಫಿ ಕುತ್ತಾಮೊಟ್ಟೆ, ಜಿಲ್ಲಾ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿ ಯೂಸುಫ್ ಅಂಜಿಕಾರ್, ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಜಿ.ಎಂ. ಇಬ್ರಾಹಿಂ ಶಿಲ್ಪಾ, ಬ್ಲಾಕ್ ಮೈನಾರಿಟಿ ಕಾಂಗ್ರೆಸ್ ಕಾರ್ಯದರ್ಶಿ ಶಹೀದ್ ಪಾರೆ, ಅಶೋಕ್ ಚೂಂತಾರ್ (ಸುಳ್ಯ ಬ್ಲಾಕ್ ಮಾಧ್ಯಮ ಸಂಯೋಜಕ) ಉಪಸ್ಥಿತರಿದ್ದರು.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ