ಬೆಂಗಳೂರು, ನವೆಂಬರ್ 14: ಬೆಂಗಳೂರಿನ ಜೆಡಿಎಸ್ (JDS) ಕಚೇರಿಯ ಗೋಡೆಗಳಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್ಗಳು ಮಂಗಳವಾರ ರಾತ್ರಿ ಕಂಡುಬಂದಿದೆ. ಕಾಂಗ್ರೆಸ್ (Congress) ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಲು ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಕರೆಂಟ್ ಕದ್ದರೂ ಹೆಚ್ಡಿಕೆ ಪ್ರಮಾಣಿಕತೆಯನ್ನು ಮೆಚ್ಚಲೇಬೇಕು. ಕುಮಾರಸ್ವಾಮಿಯವರೇ 200 ಯುನಿಟ್ ಉಚಿತವಾಗಿದೆ ನೆನಪಿಟ್ಟುಕೊಳ್ಳಿ ಹೆಚ್ಚು ಕದಿಯಬೇಡಿ. ಕರೆಂಟ್ ಕಳ್ಳ ಕುಮಾರಸ್ವಾಮಿ ಎಂದು ಪೋಸ್ಟರ್ನಲ್ಲಿ ಉಲ್ಲೇಖಿಸಲಾಗಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಕುಮಾರಸ್ವಾಮಿ ವಿರುದ್ಧ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್ಐಆರ್ ದಾಖಲಾಗಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ