ನೆಹರೂ ಮೆಮೋರಿಯಲ್ ಕಾಲೇಜಿನ ಸಂಶೋಧನಾ ಸಂಘ ಮತ್ತು ಗ್ರಂಥಾಲಯ ವಿಭಾಗ ಹಾಗೂ ಐಕ್ಯೂಎಸಿ ವತಿಯಿಂದ “ಪ್ರಾಜೆಕ್ಟ್ ಪ್ರಪೋಸಲ್ಸ್ ಆ್ಯಂಡ್ ಫಂಡಿಂಗ್ ಏಜೆನ್ಸೀಸ್'” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವು ಮಾರ್ಚ್ 21ನೇ ಶುಕ್ರವಾರದಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಸ್ವಾಮಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ದಿನೇಶ ಪಿ.ಟಿ ಭಾಗವಹಿಸಿದ್ದು ಯೋಜನಾ ಪ್ರಸ್ತಾವನೆಯನ್ನು ಸಿದ್ಧಪಡಿಸುವ ವಿಧಾನ, ಎದುರಾಗುವ ಸಮಸ್ಯೆಗಳು, ಕಾರ್ಯವಿಧಾನಗಳು, ಹಣಕಾಸು ಸಂಸ್ಥೆಗಳ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡಿದರು. ಹಣಕಾಸಿನ ಯೋಜನಾ ಪ್ರಸ್ತಾವನೆಯನ್ನು ಸಲ್ಲಿಸುವ ಕ್ರಮಬದ್ಧತೆಯನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಾರಾದ ಡಾ. ಮಮತ ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಿಸಿದ ಕಾಲೇಜಿನ ಗ್ರಂಥಪಾಲಕರಾದ ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಸ್ಯಶಾಸ್ತ್ರ ಉಪನ್ಯಾಸಕಿ ಕೃತಿಕಾ‌ ಕೆ.ಜೆ. ಪ್ರಾರ್ಥಿಸಿ, ಹಿಂದಿ ಉಪನ್ಯಾಸಕರಾದ ಮಮತಾ ಎಚ್.ವಿ. ಸ್ವಾಗತಿಸಿ, ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಕುಲದೀಪ್ ಪಿ.ಪಿ. ವಂದಿಸಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಎಂ. ಕಾರ್ಯಕ್ರಮ ನಿರ್ವಹಿಸಿದರು.
ಅರ್ಥಶಾಸ್ತ್ರ ಉಪನ್ಯಾಸಕ ವಿಷ್ಣುಪ್ರಶಾಂತ್, ಅಜಿತ್ ಕುಮಾರ್ ಸಹಕರಿಸಿದರು.
ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡರು.

Leave a Reply

Your email address will not be published. Required fields are marked *