ದ. ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ(ಮೀಫ್) ಸಂಸ್ಥೆಗೆ ಇತ್ತೀಚೆಗೆ ಕರ್ನಾಟಕ ಸರಕಾರವು ರಾಜ್ಯೋತ್ಸವ ಪ್ರಶಸ್ತಿ ನೀಡಿ ಪುರಸ್ಕರಿಸಿದ ಹಿನ್ನಲೆಯಲ್ಲಿ ಮತ್ತು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ ಸುಳ್ಯ ಮೀಫ್ ಸಂಸ್ಥೆ ಯ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿರುವುದರಿಂದ ಇಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಮತ್ತು ರಾಷ್ಟ್ರೀಯ ಸಮಿತಿಗೆ ನೇಮಕಾತಿ ಹೊಂದಿದವರಿಗೆ ಏರ್ಪಡಿಸಲಾದ ಸನ್ಮಾನ ಸಮಾರಂಭದಲ್ಲಿ ಈ ಗೌರವಾರ್ಪಣೆ ಮಾಡಲಾಯಿತು

.


ಕೆ. ಎಂ. ಮುಸ್ತಫ ಮೀಫ್ ಪರವಾಗಿ ಸನ್ಮಾನ ಸ್ವೀಕರಿಸಿದರು, ಸಭೆಯ ಅಧ್ಯಕ್ಷತೆ ವಹಿಸಿದ್ದ
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯಾಧ್ಯಕ್ಷ , ವಿಧಾನ ಪರಿಷತ್ ಶಾಸಕ ಅಬ್ದುಲ್ ಜಬ್ಬಾರ್ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಎಲ್ಲಾ ರೀತಿಯ ಯೋಜನೆ ಗಳನ್ನು ಸರಕಾರ ರೂಪಿಸುತ್ತಿದ್ದು ಇದರ ಪ್ರಯೋಜನ ಸಮುದಾಯದ ಕಟ್ಟ ಕಡೆಯ ವ್ಯಕ್ತಿಗೆ ತಲುಪಲು ಮೀಫ್ ನಂತಹ ಸಂಸ್ಥೆ ಅಗತ್ಯ ಎಂದರು ವೇದಿಕೆಯಲ್ಲಿ
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಇರ್ಶಾದ್ ಬೆಂಗಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿರಾಜ್ ದಾವಣಗೆರೆ, ಜವಾಹರ್ ಲಾಲ್ ಬಾಲಭವನ್ ರಾಜ್ಯಾಧ್ಯಕ್ಷ ಮೋಯಿನುದ್ದೀನ್, ಎಐಸಿಸಿ ಅಲ್ಪಸಂಖ್ಯಾತ ವಿಭಾಗ ರಾಷ್ಟ್ರೀಯ ಸಂಯೋಜಕ ಶಕೀಲ್ ಅಹಮದ್, ಚೆನ್ನೈ ಉಸ್ತುವಾರಿ ಪದಾಧಿಕಾರಿ ನಜ್ಮುಲ್ ಇಸ್ಲಾಂ ಮೇಹo, ರಾಷ್ಟ್ರೀಯ ಉಪಾಧ್ಯಕ್ಷ ಬ್ರಿಜೇಶ್, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಲ್ಕೀಸ್ ಬಾನು ಮೊದಲಾದವರು ಉಪಸ್ಥಿತರಿದ್ದರು

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ