Advertisement
ಕಳೆದ ಕೆಲವು ದಿನಗಳಿಂದ ಸುಳ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಭೂಕಂಪನ ದಿಂದ ಜನತೆ ಬೆಚ್ಚಿಬಿದ್ದಿದ್ದಾರೆ. ಈ ನಿಟ್ಟಿನಲ್ಲಿ ಭೂಕಂಪನದಿಂದ ರಕ್ಷಣೆ ಕೋರಿ ಇಂದು ಮೊಗರ್ಪಣೆ ಜುಮಾ ಮಸೀದಿಯಲ್ಲಿ ಶುಕ್ರವಾರದ ನಮಾಜಿನ ಬಳಿಕ ವಿಶೇಷ ಪ್ರಾರ್ಥನೆಯನ್ನು ನೆರವೇರಿಸಲಾಯಿತು. ಮೊಗರ್ಪಣೆ ಜುಮಾ ಮಸ್ಜಿದ್ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಖಾಫಿ ಸಾಮೂಹಿಕ ಪ್ರಾರ್ಥನೆ ನೇತೃತ್ವ ನೀಡಿದರು.
Advertisement