ಲಕ್ನೋ: ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡುತ್ತಿದ್ದಾನೆ. ಅಲ್ಲದೆ ಇಂದು ನಡೆಯಲಿರುವ ಪಂದ್ಯದಲ್ಲಿ ಗೆದ್ದು ವಿಶ್ವಕಪ್‍ನೊಂದಿಗೆ ಮಗ ಮನೆಗೆ ಮರಳುತ್ತಾನೆ ಎಂದು ಸ್ವಿಂಗ್ ಮಾಸ್ಟರ್ ಮೊಹಮ್ಮದ್ ಶಮಿ (Mohammad Shami) ತಾಯಿ ಹೇಳಿದ್ದಾರೆ. ಐಸಿಸಿ ಕ್ರಿಕೆಟ್ ವರ್ಲ್ಡ್ ಫೈನಲ್ ಪಂದ್ಯಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅಂಜುಂ ಅರಾ‌ (Anjum Ara) ಅವರು ಮೊದಲು ಟೀಂ ಇಂಡಿಯಾಗೆ (Team India) ಆಲ್ ದಿ ಬೆಸ್ಟ್ ಹೇಳಿದ್ದಾರೆ. ಅಲ್ಲದೆ ಇಂದು ಕೂಡ ನನ್ನ ಮಗ ಇಡೀ ದೇಶವೇ ಹೆಮ್ಮೆ ಪಡುವಂತೆ ಆಟವಾಡುತ್ತಾನೆ.

ದೇವರು ಅವನಿಗೆ ಒಳ್ಳೆಯದು ಮಾಡಲಿ ಎಂದಿದ್ದಾರೆ. ಇಂದು ಮಗ ವಿಶ್ವಕಪ್‍ನೊಂದಿಗೆ (World Cup 2023) ಮನೆಗೆ ಮರಳುತ್ತಾನೆ ಎಂಬ ವಿಶ್ವಾಸವಿದೆ. ಇಡೀ ಭಾರತ ಕ್ರಿಕೆಟ್ ತಂಡವೇ ನನ್ನ ಮಗನಿದ್ದಂತೆ. ಒಟ್ಟಿನಲ್ಲಿ ಎಲ್ಲರೂ ವಿಶ್ವಕಪ್ ಗೆದ್ದು ಮನೆಗೆ ಬರಲಿ ಎಮದು ಪ್ರಾರ್ಥಿಸುವುದಾಗಿ ಅವರು ತಿಳಿಸಿದರು. ಒಟ್ಟಿನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ (IND Vs AUS) ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಅಹ್ಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಣಾಹಣಿ ನಡೆಯಲಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸೆ ಸೇರಿದಂತೆ ಭಾರತದ ಕ್ರಿಕೆಟ್ ದಿಗ್ಗಜರು, ಟೀಮ್ ಇಂಡಿಯಾ ಆಟಗಾರರ ಕುಟುಂಬದವರು, ಬಾಲಿವುಡ್, ಸ್ಯಾಂಡಲ್‍ವುಡ್ ನಟ-ನಟಿಯರು ಭಾರತ ಗೆಲ್ಲಲಿ ಎಂದು ಶುಭಕೋರಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾ ಗೆಲುವಿಗೆ ದೇಶಾದ್ಯಂತ ಹೋಮ-ಹವನಗಳು ನಡೆಯುತ್ತಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ