ನವದೆಹಲಿ: ಇಸ್ರೇಲ್-ಹಮಾಸ್ ನಡುವೆ ಯುದ್ಧ ಮುಂದುವರಿದಿದ್ದು, ಈ ನಡುವೆ ದೆಹಲಿಯಲ್ಲಿರುವ (New Delhi) ಇಸ್ರೇಲ್ ರಾಯಭಾರಿ ಅಧಿಕಾರಿ (Ambassador of Israel) ನೌರ್ ಗಿಲೋನ್ ಮೇಲೆ ಮಾರಣಾಂತಿಕ ದಾಳಿ ಸಂಭವಿಸಬಹುದು ಮತ್ತು ಕಚೇರಿ (Embassy of Israel) ಮೇಲೆ ದಾಳಿ ನಡೆಯಬಹುದು ಎಂದು ಗುಪ್ತಚರ ಇಲಾಖೆ (Intelligence Department) ದೆಹಲಿ ಪೊಲೀಸರಿಗೆ ಎಚ್ಚರಿಕೆ ನೀಡಿದೆ. ರಾಯಭಾರಿ ಮೇಲಿನ ದಾಳಿಯ ಬಗ್ಗೆ ದೇಶದ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದೆ. ಇದಲ್ಲದೆ ಇಸ್ರೇಲ್ ರಾಯಭಾರ ಕಚೇರಿಗೂ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆಗಳು ಬರುತ್ತಿವೆ. ಈ ಬಗ್ಗೆ ಮಾಹಿತಿ ಆಧರಿಸಿ ದೆಹಲಿಯ ರಾಯಭಾರಿ ಕಚೇರಿಗೆ ಭದ್ರತೆ ಹೆಚ್ಚಿಸಲಾಗಿದೆ. ಎರಡು ದಿನಗಳ ಹಿಂದೆ ಕೇಂದ್ರ ಗೃಹ ಸಚಿವಾಲಯವು ದೆಹಲಿ ಪೊಲೀಸರಿಗೆ ಪತ್ರ ಬರೆದಿದ್ದು, ಇಸ್ರೇಲ್ ರಾಯಭಾರ ಕಚೇರಿಯಿಂದ ಪತ್ರ ಬಂದಿದೆ. ಇಸ್ರೇಲ್ ರಾಯಭಾರಿ ಮೇಲೆ ಉಗ್ರರ ದಾಳಿಯ ಬೆದರಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಬರುತ್ತಿವೆ ಎಂದು ರಾಯಭಾರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಉಲ್ಲೇಖಿಸಿದೆ.

ದೆಹಲಿ ಪೊಲೀಸರಿಗೆ ಸೂಕ್ತ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಲಾಗಿದೆ. ಇಸ್ರೇಲ್ ಅಬೆನ್ಸಿ ನವೆಂಬರ್ 16 ರಂದು ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಪತ್ರದ ಮೂಲಕ ಇಸ್ರೇಲ್ ರಾಯಭಾರಿಯ ಭದ್ರತೆಯನ್ನು ಕೂಡಲೇ ಹೆಚ್ಚಿಸುವಂತೆ ಗೃಹ ಸಚಿವಾಲಯಕ್ಕೆ ಆಗ್ರಹಿಸಲಾಗಿದೆ. ಗೃಹ ಸಚಿವಾಲಯದ ಪತ್ರದ ನಂತರ, ನವದೆಹಲಿ ಜಿಲ್ಲಾ ಪೊಲೀಸ್ ಉಪ ಆಯುಕ್ತ ಪ್ರವನ್ ತಾಯಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಇಸ್ರೇಲ್ ರಾಯಭಾರಿಗೆ ಬರುತ್ತಿರುವ ಬೆದರಿಕೆಗಳ ಬಗ್ಗೆ ವಿವರವಾಗಿ ತನಿಖೆ ನಡೆಸಬೇಕು ಎಂದು ಆದೇಶಿಸಿದ್ದಾರೆ. ಗೃಹ ಸಚಿವಾಲಯದ ಪತ್ರದ ನಂತರ ನವದೆಹಲಿ ಜಿಲ್ಲಾ ಪೊಲೀಸ್ ಉಪ ಆಯುಕ್ತ ಪ್ರವನ್ ತಾಯಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಇಸ್ರೇಲ್ ರಾಯಭಾರಿಗೆ ಬರುತ್ತಿರುವ ಬೆದರಿಕೆಗಳ ಬಗ್ಗೆ ವಿವರವಾಗಿ ತನಿಖೆ ನಡೆಸಬೇಕು ಎಂದು ಆದೇಶಿಸಿದ್ದಾರೆ. ರಾಯಭಾರಿ ಮತ್ತು ಇಸ್ರೇಲ್ ರಾಯಭಾರಿ ಕಚೇರಿಯ ಭದ್ರತೆಯನ್ನು ಹೆಚ್ಚಿಸುವಂತೆ ಪೊಲೀಸ್ ಉಪ ಆಯುಕ್ತರು ಕೇಳಿಕೊಂಡಿದ್ದಾರೆ. ಅಲ್ಲದೆ ಈ ಭಾಗದಲ್ಲಿ ಬೀಟ್ ಮತ್ತು ಗಸ್ತು ಸಿಬ್ಬಂದಿ ಜಾಗರೂಕರಾಗಿರಲು ಆದೇಶಿಸಲಾಗಿದೆ

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ