ಭೋಪಾಲ್: ಹಾಡಹಗಲೇ ಜನನಿಬೀಡ ಪ್ರದೇಶದಲ್ಲಿ ಯುವತಿಯೊಬ್ಬಳನ್ನು ಇಬ್ಬರು ಮುಸುಕುಧಾರಿಗಳು ಅಪಹರಿಸಿದ ಘಟನೆ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ (Gwalior) ನಡೆದಿದೆ.

ಯುವತಿ ಬಸ್‍ನಲ್ಲಿ ಬಂದು, ಆಕೆಯ ಸಹೋದರನಿಗಾಗಿ ಪೆಟ್ರೋಲ್ ಬಂಕ್ ಒಂದರ ಬಳಿ ಕಾಯುತ್ತಿದ್ದಾಗ ಆಕೆಯ ಅಪಹರಣವಾಗಿದೆ. ಅಪಹರಣಕಾರರಲ್ಲಿ ಓರ್ವ ಹೆಲ್ಮೆಟ್ ಧರಿಸಿದ್ದರೆ, ಮತ್ತೋರ್ವ ಮುಖಕ್ಕೆ ಬಟ್ಟೆಯನ್ನು ಸುತ್ತಿಕೊಂಡಿದ್ದ. ಯುವತಿಯನ್ನು ಅಪಹರಿಸುತ್ತಿರುವ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಹರಣಕ್ಕೊಳಗಾದ ಯುವತಿ ಬಿಎ ವ್ಯಾಸಂಗ ಮಾಡುತ್ತಿದ್ದು, ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ನಿವಾಸಿಯಾಗಿದ್ದಾಳೆ. ತನ್ನ ಕುಟುಂಬದೊಂದಿಗೆ ದೀಪಾವಳಿ ಆಚರಿಸಲು ಊರಿಗೆ ತೆರಳಿದ್ದಳು. ಈ ವೇಳೆ ಯುವತಿಯ ಅಪಹರಿಸಲಾಗಿದೆ. ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೆಟ್ರೋಲ್ ಬಂಕ್ ಸೇರಿದಂತೆ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆಸಲಾಗುತ್ತಿದೆ. ಅಪಹರಣಕ್ಕೆ ಕಾರಣ ತಿಳಿದು ಬಂದಿಲ್ಲ. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ