ಅಹಮದಾಬಾದ್‌: ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ (World Cup Cricket) ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ (Team India) ಸೋತ ಬಳಿಕ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಡ್ರೆಸ್ಸಿಂಗ್‌ ರೂಮ್‌ಗೆ (Dressing Room) ತೆರಳಿ ಆಟಗಾರರಿಗೆ ಸಮಾಧಾನ ಹೇಳಿದ್ದಾರೆ. ಪ್ರಧಾನಿ ಡ್ರೆಸ್ಸಿಂಗ್‌ ರೂಮ್‌ಗೆ ಬಂದ ವಿಚಾರವನ್ನು ಬೌಲರ್‌ ಮೊಹಮ್ಮದ್‌ ಶಮಿ (Mohammed Shami) ಮತ್ತು ಆಲ್‌ರೌಂಡರ್‌ ರವೀಂದ್ರ ಜಡೇಜಾ (Ravindra Jadeja) ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದ್ದಾರೆ. ಶಮಿಯನ್ನು ಅಪ್ಪಿದ ಮೋದಿ ಸಮಾಧಾನ ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಶಮಿ, ದುರದೃಷ್ಟವಶಾತ್ ನಿನ್ನೆಯ ದಿನ ನಮ್ಮದಾಗಿರಲಿಲ್ಲ. ಪಂದ್ಯಾವಳಿಯುದ್ದಕ್ಕೂ ನಮ್ಮ ತಂಡ ಮತ್ತು ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಾನು ಎಲ್ಲಾ ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ವಿಶೇಷವಾಗಿ ಡ್ರೆಸ್ಸಿಂಗ್ ಕೋಣೆಗೆ ಬಂದು ನಮ್ಮ ಉತ್ಸಾಹವನ್ನು ಹೆಚ್ಚಿಸಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ. ನಾವು ಮತ್ತೆ ಪುಟಿದೇಳುತ್ತೇವೆ ಎಂದು ಬರೆದುಕೊಂಡಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ