ಹೈದರಾಬಾದ್‌: ಭಾರತೀಯ ಜನತಾ ಪಕ್ಷವೂ (BJP) ಮುಸ್ಲಿಂ ಸಮುದಾಯಕ್ಕಿರುವ 4% ಮೀಸಲಾತಿಯನ್ನೂ (Muslim Reservation) ತೆಗೆದುಹಾಕುತ್ತೇವೆ.

ಅದನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC-ST) ಹಾಗೂ ಇತರೇ ಹಿಂದುಳಿದ ವರ್ಗದ ಜನರಿಗೆ ಹಂಚುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ. ನವೆಂಬರ್‌ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆ (Telangana Assembly Elections) ಹಿನ್ನೆಲೆಯಲ್ಲಿ ಜಗ್ತಿಯಾಲ್‌ನಲ್ಲಿ ಚುನಾವಣಾ ಪ್ರಚಾರಸಭೆ ನಡೆಯಿತು. ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾ, ಮುಸ್ಲಿಂ ಸಮುದಾಯಕ್ಕೆ ನೀಡಿರುವ 4% ಮೀಸಲಾತಿಯನ್ನೂ ತೆಗೆದುಹಾಕ್ತೇವೆ, ಎಂದರಲ್ಲದೇ ತೆಲಂಗಾಣದಲ್ಲಿರುವ ಮಾದಿಗ ಸಮುದಾಯಕ್ಕೆ ಎಸ್ಸಿ ವರ್ಗದ ಅಡಿಯಲ್ಲಿ ಮೀಸಲಾತಿ ನೀಡುವುದಾಗಿ ಘೋಷಿಸಿದ್ದಾರೆ. ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್‌ ಅವರು ಆಲ್‌ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಅಸಾದುದ್ದೀನ್‌ ಓವೈಸಿಗೆ ಹೆದರಿ ಹೈದರಾಬಾದ್‌ ವಿಮೋಚನಾ ದಿನವನ್ನು ಆಚರಿಸುತ್ತಿಲ್ಲ. ಆದ್ರೆ ನಾವು ಓವೈಸಿಗೆ ಹೆದರಲ್ಲ. ಮುಂದೆ ತೆಲಂಗಾಣದಲ್ಲಿ ಹೈದರಾಬಾದ್‌ ವಿಮೋಚನಾ ದಿನವನ್ನು ರಾಜ್ಯ ದಿನವನ್ನಾಗಿ ಆಚರಿಸುತ್ತೇವೆ ಎಂದು ಹೇಳಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ