ಭಾರತ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ 23 ವರ್ಷದ ರಾಹುಲ್‌ ಲಾಹೊರ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಲಿಯತೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿನಿಮಾ ಹಾಲ್ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಹುಲ್ ಲೋಹರ್ ಅವರು ಈ ಪ್ರದೇಶದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು,

ಫೈನಲ್ ಪಂದ್ಯ ವೀಕ್ಷಿಸಲು ಭಾನುವಾರ ರಜೆ ಕೂಡ ತೆಗೆದುಕೊಂಡಿದ್ದ. ಆಸ್ಟ್ರೇಲಿಯಾ ವಿರುದ್ಧದ ಭಾರತದ ಸೋಲಿನಿಂದ ತೀವ್ರ ಮನನೊಂದ ಯುವಕ ತಮ್ಮ ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅವರ ಸೋದರಮಾವ ಉತ್ತಮ್ ಸುರ್ ಹೇಳಿದ್ದಾರೆ. ಉಳಿದಂತೆ ಅವರ ಜೀವನದಲ್ಲಿ ಅಂತಹ ಬೇರೆ ಯಾವುದೇ ಸಮಸ್ಯೆಗಳಿಲ್ಲ ಎಂದು ತಿಳಿಸಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋಮವಾರ ಬೆಳಗ್ಗೆ ಬಂಕುರಾ ಸಮ್ಮಿಲಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಸಾವಿಗೆ ಬೇರೆ ಯಾವುದೇ ಕಾರಣದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ