ನವದೆಹಲಿ: ವಿಶ್ವಕಪ್ 2023 (World Cup 2023) ಫೈನಲ್ ಪಂದ್ಯದಲ್ಲಿ ಭಾರತ ಸೋಲು ಕಂಡಿದ್ದು, ಈ ಹಿನ್ನೆಲೆಯಲ್ಲಿ ಇದೀಗ ಪ್ರಧಾನಿ ನರೇಂದ್ರ ಮೋದಿ (Nareandra Modi) ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಗೂಬೆ ಕೂರಿಸಿದ್ದಾರೆ. ರಾಜಸ್ಥಾನದ ಜಲೋರ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಅಪಶಕುನ. ಅವರದ್ದು ಐರೆನ್ ಲೆಗ್. ಹೀಗಾಗಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋತಿದೆ ಎಂದು ಹೀಯಾಳಿಸಿದ್ದಾರೆ. ನಮ್ಮ ಹುಡುಗರು ಬಹುತೇಕ ವಿಶ್ವಕಪ್ ಗೆಲ್ಲುತ್ತಿದ್ದರು. ವಿಶ್ವಕಪ್ ಗೆಲ್ಲುವ ಹುಮ್ಮಸ್ಸಿನಲ್ಲಿಯೇ

ಅಖಾಡಕ್ಕಿಳಿದಿದ್ದರು. ಆದರೆ ಕೆಟ್ಟ ಶಕುನವೊಂದು ಮೈದಾನ ಪ್ರವೇಶಿಸಿದ ಪರಿಣಾಮ ಕಪ್ ಕಳೆದುಕೊಳ್ಳುವಂತೆ ಮಾಡಿದೆ. ಅಲ್ಲದೇ ರಾಹುಲ್ ಗಾಂಧಿಯವರು ಜನರಿಂದಲೂ ಅಪಶುಕುನ ಎನ್ನುವ ಪದ ಹೇಳಿಸಿದರು. ಸದ್ಯ ರಾಹುಲ್ ಗಾಂಧಿಯವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ