ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ದಿನಾಂಕ.೨೧.೧೧.೨೦೨೩ ರಂದು ‘ಭಾಷಾ ಸೌಹಾರ್ದತಾ’ ದಿನವನ್ನು ವಿವಿಧ ಭಾಷಾ ವಿಭಾಗಗಳ ನೇತೃತ್ವದಲ್ಲಿ ಆಚರಿಸಲಾಯಿತು. ಕರ‍್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರುದ್ರಕುಮಾರ್.ಎಂ.ಎA ಇವರು ವಹಿಸಿದ್ದರು. ನೆಹರು ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮಿಥಾಲಿ ರೈ ಇವರು ವಿಶೇಷ ಉಪನ್ಯಾಸವನ್ನು ನೀಡಿದರು. ಕರ‍್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಭಾಷೆಗಳ ಹಾಡುಗಳನ್ನು ವಿದ್ಯಾರ್ಥಿಗಳು ಹಾಡುವ ಮೂಲಕ ಭಾಷಾ ಸೌಹಾರ್ದತೆಯನ್ನು ಮೆರೆದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮಮತ.ಹೆಚ್.ವಿ ಇವರು ಸ್ವಾಗತಿಸಿ, ಕಾರ‍್ಯಕ್ರಮವನ್ನು ನಿರೂಪಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶ ಸಂಯೋಜಕಿ ಡಾ.ಮಮತ.ಕೆ ವಂದಿಸಿದರು. ಶ್ರೀಮತಿ ಭವ್ಯ.ಪಿ.ಎಮ್ ಇಂಗ್ಲೀಷ್ ವಿಭಾಗ ಮುಖ್ಯಸ್ಥರು ಕರ‍್ಯಕ್ರಮವನ್ನು ಸಂಘಟಿಸಿದರು. ಉಪನ್ಯಾಸಕ, ಉಪನ್ಯಾಸಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ‍್ಯಕ್ರಮದಲ್ಲಿ ಭಾಗವಹಿಸಿದರು.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ