ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿ ದಿನಾಂಕ.೨೩.೧೧.೨೦೨೩ರಂದು ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಜರುಗಿತು. ಸಭೆಯಲ್ಲಿ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಿಥಾಲಿ.ಪಿ.ರೈ ಇವರು ಮುಖ್ಯ ಅತಿಥಿಗಳಾಗಿ ಅಗಮಿಸಿ ಶಿಕ್ಷಕ-ರಕ್ಷಕ ಸಂಘದ ಪಾತ್ರ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಬೆಳವಣಿಗೆಯಲ್ಲಿ ಹೆತ್ತವರ/ಪೋಷಕರ ಪಾತ್ರ, ವಿದ್ಯಾರ್ಥಿಗಳ ಕಲಿಕಾಮಟ್ಟ, ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾದ ವಿಷಯಗಳ ಬಗ್ಗೆ ಮಾತಾನಾಡಿದರು. ಕುಮಾರಿ ರತ್ನಸಿಂಚನ ಮತ್ತು ತಂಡದವರು ಪ್ರಾರ್ಥಿಸಿದರು. ಸಭೆಯ ವೇದಿಕೆ ಮೇಲಿದ್ದ ಗಣ್ಯರನ್ನು ಮತ್ತು ಪೋಷಕರನ್ನು ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀ ತಿಪ್ಪೇಸ್ವಾಮಿ.ಡಿ.ಹೆಚ್ ಇವರು ಸ್ವಾಗತಿಸಿದರು.


ಸಭೆಗೆ ಅತಿಥಿಗಳಾಗಿ ಆಗಮಿಸಿದ ಶ್ರೀ ವಿಶ್ವನಾಥ.ಕೆ.ಟಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಎನ್.ಎಂ.ಸಿ ಸುಳ್ಯ, ಇವರು ವಿದ್ಯಾರ್ಥಿಗಳ ಜೀವನ ಮೌಲ್ಯಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಕರ ಮತ್ತು ಪೋಷಕರ ಕರ್ತವ್ಯದ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಶ್ರೀಯುತರನ್ನು ಸಂಘದ ಪರವಾಗಿ ಹಾಗೂ ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು. ಸಭೆಯಲ್ಲಿ ಪ್ರಸ್ತುತ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಚಿನ್ನಪ್ಪ.ಕೆ.ಕೆ ರವರು ಸಭೆಯನ್ನು ಕುರಿತು ತಮ್ಮ ಹಿತನುಡಿಗಳನ್ನು ಹೇಳಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಪ್ರೊ.ರುದ್ರಕುಮಾರ್.ಎಂ.ಎA. ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ, ವಿದ್ಯಾರ್ಥಿಗಳ ಪೋಷಣೆಯಲ್ಲಿ ಹೆತ್ತವರ ಪಾತ್ರ, ಕಾಲೇಜಿನ ಸೌಲಭ್ಯಗಳ ಬಗ್ಗೆ, ಕಾಲೇಜಿನ ಫಲಿತಾಂಶದ ಬಗ್ಗೆ, ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಉತ್ತಮ ಬಾಂಧವ್ಯದ ಬಗ್ಗೆ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಪೂರಕ ಅಂಶಗಳ ಬಗ್ಗೆ ತಿಳಿಸಿದರು.
ಸಭೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ರತ್ನಾವತಿ.ಡಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕರಾದ ಡಾ.ಮಮತ.ಕೆ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾಜ ಶಾಸ್ತç ವಿಭಾಗದ ಉಪನ್ಯಾಸಕರಾದ ಶ್ರೀಮತಿ ಚಿತ್ರಾಲೇಖ ಇವರು ಮುಖ್ಯ ಅತಿಥಿಗಳ ಕಿರುಪರಿಚಯ ಮಾಡಿಕೊಟ್ಟರು. ಇದೆ ಸಭೆಯಲ್ಲಿ ೨೦೨೩-೨೪ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮತ್ತು ಪದಾÀಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶ್ರೀ ವಿಷ್ಣುಪ್ರಶಾಂತ್.ಬಿ ಅರ್ಥಶಾಸ್ತç ವಿಭಾಗದ ಉಪನ್ಯಾಸಕರು ಹಾಗೂ ಹರಿಪ್ರಸಾದ್ ಎ.ವಿ ಬಿ.ಬಿ.ಎ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದು ಕಾರ್ಯಕಲಾಪಗಳನ್ನು ನಡೆಸಿಕೊಟ್ಟರು. ಶ್ರೀ ಕುಲದೀಪ್.ಪಿ.ಪಿ ರವರು ಸಸ್ಯಶಾಸ್ತ ವಿಭಾಗದ ಮುಖ್ಯಸ್ಥರು ವಂದಿಸಿದರು. ಕುಮಾರಿ. ಗಾನ.ಬಿ.ಡಿ ದ್ವಿತೀಯ ಬಿ.ಎ ವಿದ್ಯಾರ್ಥಿನಿ ಕರ‍್ಯಕ್ರಮದ ನಿರೂಪಣೆಯನ್ನು ನಡೆಸಿಕೊಟ್ಟರು. ಪ್ರಸ್ತುತ ಈ ಸಭೆಯಲ್ಲಿ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗದವರು ಹಾಜರಿದ್ದು ಕರ‍್ಯಕ್ರಮ ಯಶಸ್ವಿಯಾಗಲು ಸಹಕರಿಸಿದರು.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ