ನೆಹರು ಮೆಮೋರಿಯಲ್ ಕಾಲೇಜಿನ ಸಾಂಸ್ಕೃತಿಕ ಸಂಘ ಮತ್ತು ಐಕ್ಯೂಎಸಿ

ವತಿಯಿಂದ ರಾಷ್ಟ್ರೀಯ ಏಕತಾ ಸಪ್ತಾಹ ಪ್ರಯುಕ್ತ ದಿನಾಂಕ.೨೩.೧೧.೨೦೨೩ನೇ ಗುರುವಾರದಂದು ಸಾಂಸ್ಕೃತಿಕ ಏಕತಾ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ವಹಿಸಿದ್ದರು. ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕಿ ಡಾ. ಮಮತ ಕೆ ಮತ್ತು ಸಾಂಸ್ಕೃತಿಕ ಸಂಘದ ಸಂಯೋಜಕ ವಿಷ್ಣುಪ್ರಶಾಂತ್ ಬಿ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳಿಂದ ದೇಶದ ವಿವಿಧ ರಾಜ್ಯಗಳ ಸಾಂಸ್ಕೃತಿಕ ವೈವಿಧ್ಯಗಳನ್ನು ಸಾರುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಎಲ್ಲಾ ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ