ತಮಿಳಿನ ಹೆಸರಾಂತ ನಟ ಸೂರ್ಯಗೆ (Surya) ಶೂಟಿಂಗ್ ವೇಳೆ ತೀವ್ರ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಕಂಗುವ ಶೂಟಿಂಗ್ ವೇಳೆ ಅವರ ಭುಜದ ಮೇಲೆ ಕ್ಯಾಮೆರಾ ಬಿದ್ದ ಕಾರಣದಿಂದಾಗಿ ಏಟು ಬಿದ್ದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಈ ವಿಷಯ ಕೇಳುತ್ತಿದ್ದಂತೆಯೇ ಸೂರ್ಯನ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತಂತೆ ಸ್ವತಃ ಸೂರ್ಯ ಅವರೇ ಸೋಷಿಯಲ್ ಮಿಡಿಯಾದಲ್ಲಿ ಬರೆದುಕೊಂಡಿದ್ದಾರೆ. ಆತಂಕ ಪಡುವಂಥದ್ದು ಏನೂ ಆಗಿಲ್ಲ. ಚೇತರಿಸಿಕೊಳ್ಳುತ್ತಿದ್ದೇನೆ. ಹಾರೈಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಆದಷ್ಟು ಬೇಗ ಮತ್ತೆ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ. ಈ ನಡುವೆ ‘ಕಂಗುವ’ (Kanguva) ಸಿನಿಮಾ ಟೀಮ್ ನಿಂದ ಭರ್ಜರಿ ಅಪ್ ಡೇಟ್ ಸಿಕ್ಕಿದೆ. ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಈ ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಆಗಲೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ. ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ