ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ರಾಷ್ಟ್ರೀಯ ಏಕತಾ ಸಪ್ತಾಹದ ಅಂಗವಾಗಿ ಮಹಿಳಾ ಏಕತಾ ದಿನವನ್ನು ದಿನಾಂಕ 24.11.2023ರಂದುಕಾಲೇಜಿನ ಆಂತರಿಕ ಗುಣಮಟ್ಟ ಖಾತರಿಕೋಶದ ನೇತೃತ್ವದಲ್ಲಿ ಏರ್ಪಡಿಸಲಾಯಿತು.

ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರ ಕುಮಾರ್ ಎಂ ಎಂ ವಹಿಸಿದ್ದರು. ಸುಳ್ಯದ ಸಂದೀಪ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹರಣಿ ಸದಾಶಿವ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ವಿಶೇಷ ಭಾಷಣದಲ್ಲಿ, ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸ್ಥಾನಮಾನ ಹಾಗೂ ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ತಾವು ತೆಗೆದುಕೊಳ್ಳಬೇಕಾಗಿರುವ ದಿಟ್ಟ ಹೆಜ್ಜೆಯ ಕುರಿತಾಗಿ ಜಾಗೃತಿಯನ್ನು ಮೂಡಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ ಸ್ವಾಗತಿಸಿ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜQ ಡಾ. ಮಮತಾ ಕೆ ವಂದಿಸಿದರು. ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಶೋಭಾ ಎ ಅತಿಥಿ ಪರಿಚಯ ಮಾಡಿಕೊಟ್ಟರು. ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಕೃಪಾ ಎ ಎನ್ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ