
ಇಂದು ಮಧ್ಯಾಹ್ನ 12 ಗಂಟೆಗೆ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ 1ರ ಫಲಿತಾಂಶವು ಫಲಿತಾಂಶ ಪ್ರಕಟಗೊಳ್ಳಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಮಧ್ಯಾಹ್ನ 12.30ಕ್ಕೆ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ನಂತರ 1.30ರ ವೇಳೆಗೆ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ
ವೀಕ್ಷಿಸಬಹುದು ಎಂದು ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು.ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ ಎಂದಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವ ಮಧು ಬಂಗಾರಪ್ಪ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದೆ.