ವಿದ್ಯುತ್ ಪ್ರವಹಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಸೋಮವಾರ ಸಂಭವಿಸಿದೆ.
ಹರೀಶ (32) ಮೃತ ದುರ್ದೈವಿ.ಹರೀಶ ಅವರು ಮನೆಯಲ್ಲಿ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ತೆರಳಿ ಪ್ಯೂಸ್ ಹಾಕಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಹರಿದು ಹರೀಶ್ ಅವರು ಮೃತಪಟ್ಟಿದ್ದಾರೆ. ಇನ್ನು ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಹರೀಶ ಅವರು ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದರು ಎನ್ನಲಾಗಿದೆ.