ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಮ್ಮಾನ ಮಾಡಿದರು.
ವಾಣಿಜ್ಯ ವಿಭಾಗದಲ್ಲಿ ಪ್ರಥಮ ಜನನ ನ ರ‍್ಯಾಂಕ್ ಪಡೆದ ಕೆನರಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಪಶ್ರೀ ಹಾಗೂ ವಿಜ್ಞಾನ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ಎಕ್ಸ್‌ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ಅವರನ್ನು ಏಪ್ರಿಲ್ 8 ರಂದು ಫಲಿತಾಂಶ ಘೋಷಣೆಯ ನಂತರ ಜಿಲ್ಲಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು. ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ. ಆನಂದ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಂತರ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅವರ ಅಧ್ಯಯನ ವಿಧಾನಗಳು, ಕಲಿಕಾ ತಂತ್ರಗಳು ಮತ್ತು ಶ್ರದ್ದೆ ಕುರಿತು ಚರ್ಚಿಸಿದರು.
ಸನ್ಮಾನ ಸಮಾರಂಭದಲ್ಲಿ ಅಮೂಲ್ಯ ಅವರ ಪೋಷಕರಾದ ಡಾ. ದಿನೇಶ್ ಕಾಮತ್ ಮತ್ತು ಡಾ. ಅನುರಾಧಾ ಕಾಮತ್, ದೀಪಶ್ರೀ ಅವರ ಪೋಷಕರಾದ ಅಶೋಕ್ ಎಸ್. ಮತ್ತು ಸುಮಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಧರ್ ಹೆಚ್ ಜಿ, ಇಲಾಖೆಯ ಶಾಖಾಧಿಕಾರಿ ನಿತಿನ್ ಶೆಟ್ಟಿ, ಕೆನರಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಲತಾ ಮಹೇಶ್ವರಿ, ಎಕ್ಸ್‌ಪರ್ಟ್ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ಭಟ್ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *