ಮಲಯಾಳಂನ ಖ್ಯಾತ ಹಿರಿಯ ನಟಿ ಆರ್‌. ಸುಬ್ಬಲಕ್ಷ್ಮಿ ನಿಧನ

ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್‌. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಿರಿಯ ನಟಿ ಸುಬ್ಬಲಕ್ಷ್ಮಿ ಸಂಗೀತ ಕ್ಷೇತ್ರದಲ್ಲೂ ಸಾಕಷ್ಟು ಹೆಸರು ಮಾಡಿದ್ದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸಿನಮಾ ರಂಗದಲ್ಲಿ ಮಾತ್ರವಲ್ಲ, ಚಿತ್ರಕಲೆ ಮತ್ತು ಸಂಗೀತ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಸುಬ್ಬಲಕ್ಷ್ಮಿ.

ಮಲಯಾಳಂನ ಅನೇಕ ಸ್ಟಾರ್ ನಟರ ಜೊತೆಗೆ ಕೆಲಸ ಮಾಡಿದ್ದ ಸುಬ್ಬಲಕ್ಷ್ಮಿ ಅವರು, ಇತ್ತೀಚಿನ ದಿನಗಳಲ್ಲಿ ಅಜ್ಜಿ ಪಾತ್ರಕ್ಕೆ ಫಿಕ್ಸ್ ಆಗಿದ್ದರು. ಸಾಕಷ್ಟು ಚಿತ್ರಗಳಲ್ಲಿ ಅಜ್ಜಿಯಾಗಿಯೇ ಫೇಮಸ್ ಆದವರು. ಪಾಂಡಿಪ್ಪ, ನಂದನಂ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಇವರದ್ದು.  ಸುಬ್ಬಲಕ್ಷ್ಮಿ ಅವರು, ಕರ್ನಾಟಿಕ್‌ ಸಂಗೀತಗಾರ್ತಿ ಮತ್ತು ವರ್ಣಚಿತ್ರಕಾರರೂ ಆಗಿದ್ದಾರೆ. ಮಲಯಾಳಂ ಸಿನಿಮಾದಲ್ಲಿ ವಿಶಿಷ್ಟ ಪೋಷಕ ನಟಿಯರಲ್ಲಿ ಒಬ್ಬರಾಗಿದ್ದರು, ನಾಜೂಕು ಮತ್ತು ನಟನಾ ಕೌಶಲ್ಯದಿಂದ ಅಜ್ಜಿಯ ಪಾತ್ರಗಳನ್ನು ಮನಮುಟ್ಟುವಂತೆ ನಿರ್ವಹಿಸುತ್ತಿದ್ದರು.  ನಟಿಯ ನಿಧನಕ್ಕೆ ನಟರು ಮಾತ್ರವಲ್ಲ, ಕೇರಳದ ಮುಖ್ಯಮಂತ್ರಿಗಳು ಕೂಡ ಸಂತಾಪ ಸೂಚಿಸಿದ್ದಾರೆ.

namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Recent Posts

ಇನ್ನು ಮುಂದೆ ವ್ಯಾಟ್ಸ್ಆ್ಯಪ್ ಡಿಪಿ ಸ್ಕ್ರೀನ್‌ಶಾಟ್ ತೆಗೆಯಲು ಸಾಧ್ಯವಿಲ್ಲ, ಶೀಘ್ರದಲ್ಲೇ ಹೊಸ ಫೀಚರ್!

ವ್ಯಾಟ್ಸ್ಆ್ಯಪ್ ಸುರಕ್ಷತಾ ಫೀಚರ್ಸ್ ಮತ್ತಷ್ಟು ಬಿಗಿಗೊಳ್ಳುತ್ತಿದೆ. ಖಾಸಗಿತನಕ್ಕೆ ಧಕ್ಕೆಯಾಗುವುದನ್ನು ತಡೆಯಲು ವ್ಯಾಟ್ಸ್ಆ್ಯಪ್ ಇದೀಗ ಹೊಸ ಫೀಚರ್ ಪರಿಚಯಿಸುತ್ತಿದೆ. ಇನ್ನು ಮುಂದೆ…

56 mins ago

ಅರಂತೋಡು ಎಸ್ ಕೆಎಸ್ಎಸ್ಎಫ್ ಶಾಖೆ ವತಿಯಿಂದ ಮುಸಾಬಕ ಸಾಹಿತ್ಯ ಸ್ಪರ್ದೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ

ಇತ್ತೀಚೆಗೆ ಪುತ್ತೂರಿನ ಪರ್ಲಡ್ಕದಲ್ಲಿ ನಡೆದ ರಾಜ್ಯಮಟ್ಟದ ಮುಸಾಬಕ ಕಲಾ ಸಾಹಿತ್ಯೋತ್ಸವದಲ್ಲಿ ಜೂನಿಯರ್ ಆರೇಬಿಕ್ ಬರವಣಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು…

3 hours ago

ಸದರ್ನ್ ರೆಸಿಡೆನ್ಸಿಯಲ್ಲಿ ಇಸಾಕ್ ಎಂಬುವವರು ಆತ್ಮಹತ್ಯೆ .!

ಸುಳ್ಯ ಮಾ.೪: ಇಲ್ಲಿನ ಜೂನಿಯರ್ ಕಾಲೇಜು ರಸ್ತೆ ಬಳಿ ಇರುವ ಸದರ್ನ್ ರೆಸಿಡೆನ್ಸಿಯಲ್ಲಿ ಇಸಾಕ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ…

7 hours ago

ಅರಂತೋಡು: ಪಾದಚಾರಿಗೆ ಬೈಕ್ ಡಿಕ್ಕಿ; ಪಾದಚಾರಿಯ ಕಾಲಿಗೆ ಏಟು

ಅರಂತೋಡು ಮಸೀದಿ ಮುಂಭಾಗ ವ್ಯಕ್ತಿಯೊರ್ವರು ರಸ್ತೆ ದಾಟುತ್ತಿದ್ದ ವೇಳೆ, ಮುಖ್ಯ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಪಾದಾಚಾರಿಗೆ ಗಾಯವಾದ…

11 hours ago

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ

ಬಂಟ್ವಾಳ:  ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು.…

12 hours ago

ರಾಷ್ಟ್ರೀಯ ಸ್ಮಾರ್ಟ್ ಸ್ಕಾಲರ್ ಶಿಪ್ ಪರೀಕ್ಷೆ ಯಲ್ಲಿ ವಿಶಿಷ್ಟ ಸಾಧನೆ ಮಾಡಿದ ಸುಳ್ಯದ ಮದರಸ ವಿದ್ಯಾರ್ಥಿ ಗಳಿಗೆ ಗಾಂಧಿನಗರ ಜಮಾಅತ್, ಮದರಸ ಸ್ಟಾಫ್ ಕೌನ್ಸಿಲ್ ವತಿಯಿಂದ ಅಭಿನಂದನಾ ಸಮಾರಂಭ

ರಾಷ್ಟ್ರೀಯ ಸ್ಮಾರ್ಟ್ ಸ್ಕಾಲರ್ ಶಿಪ್ ಪರೀಕ್ಷೆ ಯಲ್ಲಿ ವಿಶಿಷ್ಟ ಸಾಧನೆ ಮಾಡಿದ ಸುಳ್ಯದ ಮದರಸ ವಿದ್ಯಾರ್ಥಿ ಗಳಿಗೆ ಗಾಂಧಿನಗರ ಜಮಾಅತ್,…

1 day ago