ಕಾಸರಗೋಡು ಮೂಲದ ಹಾಶಿಂ ಸೆರೆ

ಕಳೆದ ಒಂದು‌ ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ ಮನೆಯಲ್ಲಿ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಯ ಪೊಲೀಸರು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳ್ಳತನ ಮಾಡಿದ ಆರೋಪಿ ಕಾಸರಗೋಡು ಮೂಲದ ಹಾಶಿಂ(43) ಎಂದು ತಿಳಿದು ಬಂದಿದ್ದು

ಇಂದು ಆತನನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಅಡಿಷನಲ್‌ ಎಸ್ಪಿ, ಹಾಗೂ ಪುತ್ತೂರು ಡಿ ವೈ ಎಸ್ ಪಿ ಅವರ ಮಾರ್ಗದರ್ಶನ ಮೇರೆಗೆ ಸುಳ್ಯ ವೃತ್ತ ನಿರೀಕ್ಷಕ ಮೋಹನ್ ಕೊಠಾರಿ, ಉಪನಿರೀಕ್ಷಕ ಈರಯ್ಯ ದೂಂತೂ‌ರ್, ಸಿಬ್ಬಂದಿ ವರ್ಗದವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ