ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರು ಮೌಲ್ಯಮಾಪನದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಕಾಶ್ .ಎಚ್.ಪಿ.ಇತಿಹಾಸ ವಿಷಯದಲ್ಲಿ 10 ಅಂಕಗಳನ್ನು ಹೆಚ್ಚುವರಿ ಪಡೆದು 91 ಅಂಕಕ್ಕೆ ಏರಿಕೆ ಆಗಿದೆ.ಆ ಮೂಲಕ 547 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಕಾಲೇಜಿನ ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ,91 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು 5 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಒಟ್ಟಾರೆಯಾಗಿ ಶೇಕಡಾ 95 ಫಲಿತಾಂಶ ಪಡೆದುಕೊಂಡಿದೆ.

Leave a Reply

Your email address will not be published. Required fields are marked *