ಕದನ ವಿರಾಮ ಮಾತುಕತೆ ಘೋಷಣೆಯಾದ ಕೆಲವೇ ಕ್ಷಣಗಳಲ್ಲಿ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (Pakistan Directors General of Military Operations -DGMO) ಇಂದು ಮಧ್ಯಾಹ್ನ 3:35 ಕ್ಕೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದಾರೆ ಎಂದು ಹೇಳಿದರು.

ಭಾರತೀಯ ಸಮಯ 1700 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ ಮತ್ತು ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ( ceasefire ) ಎರಡೂ ಕಡೆಯವರು ನಿಲ್ಲಿಸುವುದಾಗಿ ಅವರು ಹೇಳಿದರು.

“ಪಾಕಿಸ್ತಾನದ ಡಿಜಿಎಂಒ ಇಂದು ಮಧ್ಯಾಹ್ನ 3:35 ಕ್ಕೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದರು. ಭಾರತೀಯ ಸಮಯ 1700 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ, ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಎರಡೂ ಕಡೆಯವರು ನಿಲ್ಲಿಸುವುದಾಗಿ ಅವರ ನಡುವೆ ಕದನ ವಿರಾಮಕ್ಕೆ ( ceasefire ) ಒಪ್ಪಂದ ಮಾಡಿಕೊಳ್ಳಲಾಯಿತು. ಈ ತಿಳುವಳಿಕೆಯನ್ನು ಜಾರಿಗೆ ತರಲು ಎರಡೂ ಕಡೆಯಿಂದಲೂ ಸೂಚಿಸಿದ್ದಾರೆ ಎಂದರು.

ಆದಾಗ್ಯೂ, ಹಿಂದಿನ ದಿನ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ಕ್ರೆಡಿಟ್‌ಗಳನ್ನು ತೆಗೆದುಕೊಂಡು ಎರಡೂ ರಾಷ್ಟ್ರಗಳು “ಪೂರ್ಣ ಮತ್ತು ತಕ್ಷಣದ ಕದನ ವಿರಾಮ”ಕ್ಕೆ ಒಪ್ಪಿಕೊಂಡಿವೆ ಎಂದು ಹೇಳಿದರು.

ಅಮೆರಿಕದ ಮಧ್ಯಸ್ಥಿಕೆ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿಕೊಂಡ ಟ್ರಂಪ್, ಬಿಕ್ಕಟ್ಟನ್ನು ಶಮನಗೊಳಿಸಲು “ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆ”ಯನ್ನು ಆಯ್ಕೆ ಮಾಡಿದ್ದಕ್ಕಾಗಿ ಎರಡೂ ದೇಶಗಳ ನಾಯಕತ್ವವನ್ನು ಶ್ಲಾಘಿಸಿದರು.

ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡ ಟ್ರಂಪ್, “ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನಗಳು ಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು!” ಎಂದು ಬರೆದಿದ್ದಾರೆ.

Leave a Reply

Your email address will not be published. Required fields are marked *