ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ನಿವೃತ್ತಿ ಕುರಿತಾದ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕೊಹ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಕಿಂಗ್ ಕೊಹ್ಲಿಯ 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯಗೊಂಡಂತಾಗಿದೆ.
ಟೆಸ್ಟ್ನಲ್ಲಿ ವಿರಾಟ್ ಕೊಹ್ಲಿ ಅತ್ಯಂತ ಪರಿಣಾಮಕಾರಿ ಪ್ರದರ್ಶನ ನೀಡಿದ್ದಾರೆ. ಈವರೆಗೆ 123 ಪಂದ್ಯಗಳನ್ನು ಆಡಿರುವ ಅವರು 46.9 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರ ನಡುವೆ 254* ಬಾರಿಸಿದ್ದು ಅವರು ವೈಯುಕ್ತಿಕ ಗರಿಷ್ಠ ಸ್ಕೋರ್. ಅಲ್ಲದೆ ಟೆಸ್ಟ್ ಕ್ರಿಕೆಟ್ನಲ್ಲಿ 31 ಅರ್ಧಶತಕಗಳು ಮತ್ತು 30 ಶತಕಗಳನ್ನು ಸಹ ಬಾರಿಸಿದ್ದಾರೆ.