ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮೇ 20 ಹಾಗೂ ಕರಾವಳಿ ಜಿಲ್ಲೆಗಳಿಗೆ ಮೇ 21ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಮೇ 18ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 21°C ಇರಲಿದೆ.

ಇನ್ನು ಮೇ 19ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವ ಇದೆ.

ಮೇ 20ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಮೇ 21ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬೀದ‌ರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 22 ಮತ್ತು 23ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *