ಮೆ.31:ಸುಳ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಬರೆ ಕುಸಿತ ಸಂಭವಿಸಿದ್ದು, ವಿದ್ಯುತ್ ಕಂಬಗಳು ಧರಾಶಾಹಿಯಾದ ಕಾರಣ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಇದೀಗ ಪೆರಾಜೆ ಸಮೀಪ ಬೃಹತ್ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ವಿದ್ಯುತ್ ಕಂಬದ ಮೇಲೆ ಈ ಮರ ಬಿದ್ದು ವಿದ್ಯುತ್ ಕೂಡಾ ಇಲ್ಲದಂತಾಗಿದೆ. ಸ್ಥಳೀಯರು ಆಗಮಿಸಿ ರಸ್ತೆಯಲ್ಲಿರುವ ಮರವನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ರಸ್ತೆಯ ಎರಡು ಬದಿಯಲ್ಲಿ ವಾಹನಗಳ ಕ್ಯೂ ಸಾಲುಗಟ್ಟಿವೆ