ರಾಯ್ಪುರ: ಛತ್ತೀಸ್ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲೀಯರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್ಸ್ಟೇಬಲ್ ಸತೇರ್ ಸಿಂಗ್ ಹುತಾತ್ಮರಾಗಿದ್ದಾರೆ
ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್ಸ್ಟೇಬಲ್ ಸತೇರ್ ಸಿಂಗ್ ಹುತಾತ್ಮರಾಗಿದ್ದಾರೆ.
ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಕಳೆದ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಪೈಪ್ ಬಾಂಬ್ ಸ್ಫೋಟಗೊಂಡಿದೆ.