18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳಿಬ್ಬರು ಸಾವನ್ನಪ್ಪಿದ್ದಾರೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಇಬ್ಬರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

Leave a Reply

Your email address will not be published. Required fields are marked *