ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ.ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು- ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲು ಬಂಡೆ ಬಿದ್ದಿರುವ ಸ್ಥಳದಿಂದ ಸ್ವಲ್ಪ ದೂರಕ್ಕೆ ಬಂದು ನಿಂತಿದ್ದು, ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದಂತಾಗಿದೆ.‌‌ ರೈಲು ಸ್ಥಗಿತಗೊಂಡಿದ್ದರಿಂದ ನೂರಾರು ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಕಾಲ ಕಳೆಯುತ್ತಿದ್ದು, ಅಧಿಕಾರಿಗಳು ಎಲ್ಲಾ ಪ್ರಯಾಣಿಕರಿಗೆ ಕಾಫಿ, ತಿಂಡಿ ವ್ಯವಸ್ಥೆ ಮಾಡಿದ್ದಾರೆ.

ಕೆಲವು ಪ್ರಯಾಣಿಕರು ಬೇರೆ ವಾಹನದಲ್ಲಿ ತೆರಳುತ್ತಿದ್ದಾರೆ. ರೈಲ್ವೆ ಹಳಿ ಮೇಲೆ ಬಿದ್ದಿರುವ ಮಣ್ಣನ್ನು ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ.

Leave a Reply

Your email address will not be published. Required fields are marked *