ಮಂಗಳೂರು, ಫೆ 20 : ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಈ ಘಟನೆ ನಡೆದಿದೆ.

ಮೂಡುಶೆಡ್ಡೆ ನಿವಾಸಿ ಮಮತಾ ಗಾಯಗೊಂಡ ಮಹಿಳೆ ಎಂದು ಗುರುತಿಸಲಾಗಿದೆ.ಮಮತಾ ಅವರು ಪ್ರತಿನಿತ್ಯದಂತೆ ಕೆಲಸಕ್ಕೆ ತೆರಳಲೆಂದು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಕಾರು ಅವರಿಗೆ ಢಿಕ್ಕಿ ಹೊಡೆದಿದೆನ್ನಲಾಗಿದೆ. ಅಪಘಾತಕ್ಕೀಡಾದ ಕಾರನ್ನು 9ನೇ ತರಗತಿಯ ಬಾಲಕ ಚಾಲನೆ ಮಾಡುತ್ತಿದ್ದುದಾಗಿ ಮಾಹಿತಿ ಲಭ್ಯವಾಗಿದ್ದು, ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಇನ್ನು ಮಹಿಳೆಗೆ ಢಿಕ್ಕಿಯಾದ ಕಾರು ಸ್ವಲ್ಪ ದೂರ ಮಹಿಳೆಯನ್ನು ಎಳೆದುಕೊಂಡು ಹೋಗಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ