Nammasullia: ಜೈಲಿನಿಂದ ಬಿಡುಗಡೆಯಾದ ಶಾಸಕ ಜನಾರ್ಧನ ರೆಡ್ಡಿ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಕಳೆದ ಮೇ 13 ರಂದು ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೋಡಿತ್ತಾಯಿ ಹಾಗೂ ಪರಿವಾರ ದೈವಸ್ಥಾನ ಬ್ರಹಕಲಶೋತ್ಸವಕ್ಕೆ ಜನಾರ್ಧನ ರೆಡ್ಡಿ ಆಗಮಿಸಬೇಕಿತ್ತು. ಆದರೆ ಆಂಧ್ರಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೇ 6ರಂದು ಮತ್ತೆ ಜೈಲುಪಾಲಾಗಿದ್ದರು. ಇದರಿಂದಾಗಿ ದೈವಸ್ಥಾನದ ಬ್ರಹ್ಮಕಲಶೋತ್ಸವ ಆಗಮಿಸಿರಲಿಲ್ಲ. ಹಾಗಾಗಿ ಮೇ 13ರಂದು ದೈವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ದೈವದ ಬಳಿ ಜನಾರ್ದನ ರೆಡ್ಡಿ ಆಪ್ತರು ಜೈಲಿನಿಂದ ಬಿಡುಗಡೆಗೆ ಮೊರೆ ಇಟ್ಟಿದ್ದರು. ಜೈಲಿನಿಂದ ಬಿಡುಗಡೆಯ ಒಂದುವರೆ ತಿಂಗಳ ಬಳಿಕ ದೈವಸ್ಥಾನಕ್ಕೆ ಭೇಟಿ ನೀಡಿ ತಂಬಿಲ ಸೇವೆಯನ್ನು ಜನಾರ್ದನ ರೆಡ್ಡಿ ನೀಡಿದ್ದಾರೆ. ಸಂಕ್ರಮಣದ ವಿಶೇಷ ದಿನದಂದು ದೈವಸ್ಥಾನಕ್ಕೆ ರೆಡ್ಡಿ ಭೇಟಿ ನೀಡಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ ಜೊತೆ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಉಪಸ್ಥಿತರಿದ್ದರು.


