ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಗಣನೀಯ ಪ್ರಮಾಣದಲ್ಲಿ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ

ಜು.12 ರಿಂದ ಕಾರ್ಯ ನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಏನಾದರೂ ಸಮಸ್ಯೆಗಳಿದ್ದರೆ ಶಿಕ್ಷಣ ಸಂಸ್ಥೆಗಳ ಮೇಲಧಿಕಾರಿಗಳ ಒಪ್ಪಿಗೆ ಪಡೆದು ಸ್ಥಳೀಯವಾಗಿ ನಿರ್ಧಾರ ಕೈಗೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ